ದೇಶ

ಜುಲೈ 2, 3 ರಂದು ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ

Lingaraj Badiger

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿದ್ದು, ಮಹಾ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂದೆ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಜುಲೈ 2 ರಿಂದ ಎರಡು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ.

ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿವೇಶನದ ಮೊದಲ ದಿನವಾದ ಶನಿವಾರ ವಿಧಾನಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ನಾನಾ ಪಟೋಲೆ ರಾಜೀನಾಮೆಯಿಂದ ಸ್ಪೀಕರ್ ಸ್ಥಾನ ತೆರವಾಗಿದ್ದ, ಆ ಸ್ಥಾನಕ್ಕೆ ಜುಲೈ 2 ರಂದು ಚುನಾವಣೆ ನಡೆಯಲಿದೆ ಮತ್ತು ಅಂದೇ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶ್ವಾಸಮತ ಯಾಚಿಸುವ ಸಾಧ್ಯತೆ ಇದೆ.

SCROLL FOR NEXT